ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ದೆಹಲಿ ನಿವಾಸದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ.
ಮಾನ್ ಅವರ ಕಪುರ್ತಲಾ ಮನೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಹಾಜರಾಗಿದ್ದಾರೆ ಎಂದು ಎಎಪಿ ಹೇಳಿಕೆಯಲ್ಲಿ ತಿಳಿಸಿದೆ.
‘ಮಾನ್ ಅವರ ನಿವಾಸದ ಸ್ಥಳದಿಂದ ನಗದು ಹಣ ಹಂಚಿಕೆಯಾಗಿದೆ ಎಂದು ದೂರು ಬಂದ ಕಾರಣ ಇಲ್ಲಿಗೆ ಬಂದಿದ್ದೇವೆ. ಶೋಧ ನಡೆಸಲು ಅನುಮತಿಗಾಗಿ ಕಾಯುತ್ತಿದ್ದೇವೆ’ ಎಂದು ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ದೆಹಲಿ ಮುಖ್ಯಮಂತ್ರಿ ಆತಿಶಿ, ‘ಮಾನ್ ಅವರ ಮನೆಯ ಎದುರು ಚುನಾವಣಾ ಅಧಿಕಾರಿಗಳು ತೆರಳಿದ್ದಾರೆ ಎಂದು ಬಿಜೆಪಿ ಹೇಳುತ್ತಿದೆ. ಬಿಜೆಪಿಗರು ಬಹಿರಂಗವಗಿ ಹಣ, ಶೂ, ಚಪ್ಪಲಿ ಮತ್ತು ಬೆಡ್‌ಶೀಟ್‌ಗಳನ್ನು ಹಂಚುತ್ತಿದ್ದಾರೆ. ಆದರೆ ಪೊಲೀಸರು ಅದನ್ನು ನೋಡುತ್ತಿಲ್ಲ. ಚುನಾವಣಾ ಅಧಿಕಾರಿಗಳೂ ಬಿಜೆಪಿ ಸಚಿವರ ಮನೆಗಳಿಗೆ ಶೋಧ ನಡೆಸಲು ತೆರಳುವುದಿಲ್ಲ ಎಂದು ಆತಿಶಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.