(ಚಿತ್ರ ಕೃಪೆ–X/@RamanJourno)
ನವದೆಹಲಿ: ಬಿಜೆಪಿಯ ಪರ್ವೇಶ್ ವರ್ಮಾ ಅವರ ಬೆಂಬಲಿಗರು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮೇಲೆ ದಾಳಿ ಮಾಡಿದ್ದಾರೆ ಎಂದು ಪಕ್ಷ (ಎಎಪಿ) ಶನಿವಾರ ಆರೋಪಿಸಿದೆ.
ಆದರೆ ವರ್ಮಾ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಕೇಜ್ರಿವಾಲ್ ಅವರ ಕಾರು ಬಿಜೆಪಿ ಕಾರ್ಯಕರ್ತನ ಮೇಲೆ ಹರಿದಿದ್ದು, ಪರಿಣಾಮ ಆತನ ಕಾಲು ಮುರಿದಿದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಕೇಜ್ರಿವಾಲ್ ಅವರ ಕಾರು ಬಿಜೆಪಿಯ ಕಾರ್ಯಕರ್ತನ ಮೇಲೆ ಹರಿದಿದ್ದು, ಆತನ ಕಾಲು ಮುರಿದಿದೆ, ಇದು ತುಂಬಾ ನಾಚಿಕೆಗೇಡಿನ ಸಂಗತಿ. ನಾನು ಆತನ ಆರೋಗ್ಯ ವಿಚಾರಿಸಲು ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿಗೆ ಹೋಗುತ್ತಿದ್ದೇನೆ ಎಂದು ವರ್ಮಾ ಹೇಳಿದ್ದಾರೆ.
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ಅವರು ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.