ADVERTISEMENT

'ರಾಮ ರಾಜ್ಯ'ದಿಂದ ಪ್ರೇರಣೆ ಪಡೆದ ದೆಹಲಿಯ ಎಎಪಿ ಸರ್ಕಾರ: ಕೇಜ್ರಿವಾಲ್

ಪಿಟಿಐ
Published 21 ಜನವರಿ 2024, 13:21 IST
Last Updated 21 ಜನವರಿ 2024, 13:21 IST
<div class="paragraphs"><p>ರಾಮಲೀಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್</p></div>

ರಾಮಲೀಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ದೆಹಲಿಯ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವು 'ರಾಮ ರಾಜ್ಯ'ದಿಂದ ಪ್ರೇರಣೆ ಪಡೆದಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ADVERTISEMENT

ರಾಷ್ಟ್ರ ರಾಜಧಾನಿಯ ಜನರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ರಾಮ ರಾಜ್ಯ ಕಲ್ಪನೆಯಿಂದ ದೆಹಲಿಯ ಎಎಪಿ ಸರ್ಕಾರವು ಪ್ರೇರಣೆ ಪಡೆದಿದೆ ಎಂದು ಅವರು ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ದೆಹಲಿಯ ಎಎಪಿ ಸರ್ಕಾರ ಆಯೋಜಿಸಿರುವ ಮೂರು ದಿನಗಳ ಕಾಲ ರಾಮಲೀಲಾ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಈ ಕುರಿತು ಮಾತನಾಡಿದ್ದಾರೆ.

ನಾಳೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಅನೇಕ ಮಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಭಿಲಾಷೆ ಇದ್ದರೂ ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ದೆಹಲಿ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿರುವುದರಲ್ಲಿ ನನಗೆ ಸಂತಸವಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.