ADVERTISEMENT

ಪಂಜಾಬ್: ಗುರುದ್ವಾರದ ಹೊರಗಡೆ ಎಎಪಿ ನಾಯಕನ ಗುಂಡಿಕ್ಕಿ ಹತ್ಯೆ

ಪಿಟಿಐ
Published 6 ಫೆಬ್ರುವರಿ 2026, 7:23 IST
Last Updated 6 ಫೆಬ್ರುವರಿ 2026, 7:23 IST
<div class="paragraphs"><p>ಲಕ್ಕಿ ಒಬೆರಾಯ್</p></div>

ಲಕ್ಕಿ ಒಬೆರಾಯ್

   

(ಫೇಸ್‌ಬುಕ್/ಪಿಟಿಐ ಚಿತ್ರ)

ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.

ADVERTISEMENT

ಜಲಂಧರ್‌ನ ಮಾಡೆಲ್ ಟೌನ್‌ನಲ್ಲಿರುವ ಗುರುದ್ವಾರದ ಹೊರಗೆ ಶುಕ್ರವಾರ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಬೆರಾಯ್ ತಮ್ಮ ಕಾರಿನಲ್ಲಿ ಬೆಳಿಗ್ಗೆ ಗುರುದ್ವಾರಕ್ಕೆ ಆಗಮಿಸಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದುಷ್ಕರ್ಮಿಗಳು ಕನಿಷ್ಠ ಐದು ರೌಂಡ್ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.