ADVERTISEMENT

'ಇಂಡಿಯಾ' ಮೈತ್ರಿಯಲ್ಲಿ ಮುಂದುವರಿಯುವುದರ ಕುರಿತು ಚರ್ಚಿಸಿ ನಿರ್ಧಾರ: ಸಂಜಯ್

ಪಿಟಿಐ
Published 11 ಫೆಬ್ರುವರಿ 2025, 3:57 IST
Last Updated 11 ಫೆಬ್ರುವರಿ 2025, 3:57 IST
ಸಂಜಯ್‌ ಸಿಂಗ್‌
ಸಂಜಯ್‌ ಸಿಂಗ್‌   

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಸೋಲಿನಿಂದ ಕಾಂಗ್ರೆಸ್‌–ಎಎಪಿ ನಡುವಿನ ಸಂಬಂಧ ಹದಗೆಟ್ಟಿದ್ದು, ‘ಇಂಡಿಯಾ’ ಮೈತ್ರಿಕೂಟದಲ್ಲಿ ಮುಂದುವರಿಯುವುದರ ಕುರಿತು ಚರ್ಚಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿಕೂಟದಲ್ಲಿ ಮುಂದುವರಿಯುವುದರ ಬಗ್ಗೆ ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಕುರಿತು ಚರ್ಚಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಎಎಪಿ ಸೋಲಿಗೆ ಕಾಂಗ್ರೆಸ್‌ ಕಾರಣವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಷಯದ ಕುರಿತು ಪಕ್ಷವು ವಿಮರ್ಶೆ ನಡೆಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಜನರೇ ಸರ್ವೋಚ್ಚರು. ಜನರ ನಿರ್ಧಾರವನ್ನು ಗೌರವಿಸಬೇಕು’ ಎಂದು ಹೇಳಿದ್ದಾರೆ.

ADVERTISEMENT

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ–ಕಾಂಗ್ರೆಸ್‌ ಜಗಳ ಬಿಜೆಪಿಗೆ ಲಾಭ ತಂದಿದೆ. ‘ಇಂಡಿಯಾ’ ಮೈತ್ರಿಕೂಟದಲ್ಲಿನ ಏಕತೆ ಮತ್ತು ಒಗ್ಗಟ್ಟಿನ ಕೊರತೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಹಲವು ಪಕ್ಷಗಳು ಟೀಕಿಸಿದ್ದವು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌, 2024ರ ಲೋಕಸಭೆ ಚುನಾವಣೆಗಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಗಳು ನಿರ್ದಿಷ್ಟ ಮೈತ್ರಿಯಲ್ಲಿ ಮುಂದುವರಿಯಬೇಕು ಎಂದು ಹೇಳಿತ್ತು.

ಹತ್ತು ವರ್ಷಗಳಿಗೂ ಹೆಚ್ಚು ಕಾಲ ದೆಹಲಿಯಲ್ಲಿ ಆಡಳಿತ ನಡೆಸಿದ್ದ ಎಎಪಿ ಫೆಬ್ರುವರಿ 5ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ. 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.