
ಶಾಸಕ ಹರ್ಮೀತ್ ಸಿಂಗ್
ಪಟಿಯಾಲ: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಂಜಾಬ್ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್‌ಮಾಜ್ರಾ ಆಸ್ಟ್ರೇಲಿಯಾಕ್ಕೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಟ್ರೇಲಿಯಾ ಮೂಲದ ಪಂಜಾಬಿ ವೆಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಪಠಾನ್‌ಮಾಜ್ರಾ ಕಾಣಿಸಿಕೊಂಡಿದ್ದು, ನಾನು 'ಜಾಮೀನು ಪಡೆದ ನಂತರವೇ ಮನೆಗೆ ಮರಳುತ್ತೇನೆ' ಎಂದು ಹೇಳಿದ್ದಾರೆ.
ಈ ವೇಳೆ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಈ ಪ್ರಕರಣವನ್ನು ‘ರಾಜಕೀಯ ಪಿತೂರಿ‘. ಪಂಜಾಬ್‌ನ ಜನರ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.
ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ಪಂಜಾಬ್‌ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್‌ಮಾಜ್ರಾ ಅವರನ್ನು ಸೆಪ್ಟೆಂಬರ್ 2ರಂದು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಬಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.