
ವಿಜಯ್ ಪ್ರತಾಪ್ ಸಿಂಗ್
-ಟ್ವಿಟರ್ ಚಿತ್ರ
ಚಂಡೀಗಢ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ಅಮೃತಸರ ಉತ್ತರ ಶಾಸಕ, ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಪಕ್ಷದಿಂದ ಐದು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಈಚೆಗೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಮೃತಸರದ ಶಿರೋಮಣಿ ಅಕಾಲಿದಾಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ಮನೆ ಮೇಲೆ ವಿಚಕ್ಷಣ ದಳದ ಅಧಿಕಾರಗಳು ದಾಳಿ ನಡೆಸಿದ ರೀತಿಯನ್ನು ವಿಜಯ್ ಪ್ರತಾಪ್ ಸಿಂಗ್ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಧಾರವನ್ನು ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ತೆಗೆದುಕೊಂಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೂನ್ 25ರಂದು ಮಜಿಥಿಯಾ ಅವರ ನಿವಾಸದ ಮೇಲೆ ವಿಚಕ್ಷಣ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಅವರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.