ಚಂಡೀಗಢ: ಲುಧಿಯಾನ ಪಶ್ಚಿಮ ಕ್ಷೇತ್ರದ ಉಪಚುನಾವಣೆಗೆ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಅವರನ್ನು ಇಂದು (ಬುಧವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ತೆರವಾದ ಲುಧಿಯಾನ ಪಶ್ಚಿಮ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.
ಲುಧಿಯಾನ ಮೂಲದ ಕೈಗಾರಿಕೋದ್ಯಮಿ ಅರೋರಾ, 2022ರಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.
‘ಲುಧಿಯಾನ ಪಶ್ಚಿಮ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಧನ್ಯವಾದಗಳು. ನನ್ನ ಊರಿನೊಂದಿಗೆ ಬಾಂಧವ್ಯವಿದ್ದು, ನನ್ನ ಜನರಿಗೆ ಸೇವೆ ಸಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರೋರಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.