ADVERTISEMENT

ದೇಶದಾದ್ಯಂತ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಪ್ರದರ್ಶಿಸಲು ಎಎಪಿ ಸಜ್ಜು 

ಪಿಟಿಐ
Published 28 ಮಾರ್ಚ್ 2023, 12:31 IST
Last Updated 28 ಮಾರ್ಚ್ 2023, 12:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮಾರ್ಚ್ 30ರಂದು ದೇಶದಾದ್ಯಂತ 11 ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರೈ ಮಂಗಳವಾರ ತಿಳಿಸಿದ್ದಾರೆ.

‘ಮಾರ್ಚ್ 30 ರಂದು ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಎಎಪಿ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ. ಪಕ್ಷದ ಎಲ್ಲಾ ರಾಜ್ಯ ಘಟಕಗಳಿಗೆ ಪೋಸ್ಟರ್‌ಗಳನ್ನು ಅಂಟಿಸಲು ತಿಳಿಸಲಾಗಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ’ ಎಂದು ರೈ ತಿಳಿಸಿದ್ದಾರೆ.

ಕಳೆದ ವಾರ, ದೆಹಲಿಯಾದ್ಯಂತ ಗೋಡೆಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ‘ಮೋದಿ ಹಟಾವೋ, ದೇಶ್ ಬಚಾವೋ’ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ) ಎಂಬ ಪೋಸ್ಟರ್‌ಗಳನ್ನು ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

‘ಕೇಜ್ರಿವಾಲ್ ಹಠಾವೋ, ದೆಹಲಿ ಬಚಾವೋ’ (ಕೇಜ್ರಿವಾಲ್ ತೊಲಗಿಸಿ, ದೆಹಲಿಯನ್ನು ಉಳಿಸಿ) ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಎಎಪಿಗೆ ಬಿಜೆಪಿ ತಿರುಗೇಟು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.