ಅರವಿಂದ ಕೇಜ್ರಿವಾಲ್
ಪಿಟಿಐ ಚಿತ್ರ
ನವದೆಹಲಿ: ಪಂಜಾಬ್ ಮತ್ತು ಗುಜರಾತ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಗೆಲುವು ಈ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸೆಮಿಫೈನಲ್ ಆಗಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಗುಜರಾತ್‌ನ ವಿಸಾವದರ ಮತ್ತು ಪಂಜಾಬ್‌ನ ಲುಧಿಯಾನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಎಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಪಕ್ಷವು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಜ್ರಿವಾಲ್ ಮಾತನಾಡಿದರು.
ಕಳೆದ ಮೂರು ವರ್ಷಗಳಿಂದ ಪಂಜಾಬ್‌ನಲ್ಲಿ ಸರ್ಕಾರ ನಡೆಸುತ್ತಿದ್ದೇವೆ. ಪಂಜಾಬ್‌ನಲ್ಲಿ ಆಡಳಿತ ವಿರೋಧಿ ಅಲೆಯಲ್ಲ ಆಡಳಿತ ಪರ ಅಲೆ ಇದೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ನಾವು 92 ಸ್ಥಾನಗಳನ್ನು ಗೆದ್ದಿದ್ದೆವು. 2027ರ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸುತ್ತೇವೆ ಎಂದರು.
‘ಗುಜರಾತ್‌ನಲ್ಲಿ ಎಎಪಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ, ಜನರಿಗೆ ಪ್ರಾಮಾಣಿಕ ರಾಜಕೀಯವನ್ನು ನೀಡಲು ಬಂದಿದ್ದೇವೆ. ಗುಜರಾತ್‌ನಲ್ಲಿ ಬಿಜೆಪಿಯ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಈ ಮೊದಲು ಅವರಿಗೆ ಬೇರೆ ಆಯ್ಕೆಗಳಿರಲಿಲ್ಲ. ಗುಜರಾತ್‌ನ ಜನ ಕಾಂಗ್ರೆಸ್ ಅನ್ನು ಆಯ್ಕೆಯಾಗಿ ಇಟ್ಟುಕೊಂಡಿಲ್ಲ. ಬದಲಾಗಿ ಎಎಪಿಯತ್ತ ನೋಡುತ್ತಿದ್ದಾರೆ. ಪಕ್ಷದ ಮೇಲೂ ಭರವಸೆಯನ್ನು ಇಟ್ಟುಕೊಂಡಿದ್ದಾರೆ. 2027ರಲ್ಲಿ ಗುಜರಾತ್‌ನಲ್ಲಿ ನಾವು ಸರ್ಕಾರ ರಚಿಸುತ್ತೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.