ನವದೆಹಲಿ: ‘ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ನವದೆಹಲಿ ಕ್ಷೇತ್ರದಲ್ಲಿ 42 ಸಾವಿರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿರುವ ಬಗ್ಗೆ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ನೀಡಿದ ದೂರಿನ ಬಗ್ಗೆ ಚುನಾವಣಾ ಆಯೋಗವು ಇನ್ನುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಮ್ ಆದ್ಮಿ ಪಕ್ಷವು (ಎಎಪಿ) ಶುಕ್ರವಾರ ದೂರಿದೆ.
ಈ ಬಗ್ಗೆ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಬ್ ಭಾರಧ್ವಾಜ್ ಮಾಧ್ಯಮ ಗೋಷ್ಠಿ ನಡೆಸಿದರು. ‘ಆಯೋಗದ ಮುಖ್ಯಸ್ಥರಾಗಿದ್ದ ರಾಜೀವ್ ಕುಮಾರ್ ಅವರ ಕಾರ್ಯವೈಖರಿ ‘ಅನುಮಾನಾಸ್ಪದ’ವಾಗಿತ್ತು ಮತ್ತು ಈಗನ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರೂ ಹಾಗೆಯೇ ಇದೆ. ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ, ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.