ADVERTISEMENT

ಗುಜರಾತ್ ವಿಧಾನಸಭಾ ಚುನಾವಣೆ; ಎಲ್ಲ ಕ್ಷೇತ್ರಗಳಲ್ಲೂ ‘ಆಪ್‌‘ ಸ್ಪರ್ಧೆ

ಅಹಮದಾಬಾದ್‌ನಲ್ಲಿ ‘ಆಪ್‌‘ ಕಚೇರಿ ಉದ್ಘಾಟನೆ: ಅರವಿಂದ ಕೇಜ್ರಿವಾಲ್‌

ಪಿಟಿಐ
Published 14 ಜೂನ್ 2021, 10:25 IST
Last Updated 14 ಜೂನ್ 2021, 10:25 IST
ಅರವಿಂದ್‌ ಕೇಜ್ರಿವಾಲ್‌
ಅರವಿಂದ್‌ ಕೇಜ್ರಿವಾಲ್‌   

ಅಹಮದಾಬಾದ್‌: 2022ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಹೇಳಿದರು.

ಇಲ್ಲಿ ಸೋಮವಾರ ಪಕ್ಷದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, ಗುಜರಾತ್‌ನಲ್ಲಿರುವ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ಗಿಂತಆಮ್‌ ಆದ್ಮಿ ಪಕ್ಷ ಹೆಚ್ಚು ವಿಶ್ವಾಸಾರ್ಹವಾದ ಪಕ್ಷವಾಗಿದೆ ಎಂದು ಹೇಳಿದರು.

‘ಗುಜರಾತ್‌ನಲ್ಲಿ 182 ವಿಧಾನಸಭಾ ಕ್ಷೇತ್ರಗಳಿವೆ. ಆಪ್‌ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಹೊರಮ್ಮಲಿದೆ. ಶೀಘ್ರದಲ್ಲೇ ಗುಜರಾತ್‌ ಬದಲಾವಣೆ ಕಾಣಲಿದೆ‘ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.