ADVERTISEMENT

ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಹರಿಯಾಣ ಘಟಕದಿಂದ ಪ್ರತಿಭಟನೆ

ಪಿಟಿಐ
Published 26 ಮಾರ್ಚ್ 2024, 10:25 IST
Last Updated 26 ಮಾರ್ಚ್ 2024, 10:25 IST
<div class="paragraphs"><p>ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರಿಂದ ಪ್ರತಿಭಟನೆ</p></div>

ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರಿಂದ ಪ್ರತಿಭಟನೆ

   

(ಪಿಟಿಐ ಚಿತ್ರ)

ಅಂಬಾಲಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ಮಂಗಳವಾರ ಅಂಬಾಲಾ ಮತ್ತು ಹರಿಯಾಣದ ಇತರ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು.

ADVERTISEMENT

ಅಂಬಾಲ ನಗರದ ಬಿಜೆಪಿ ಕಚೇರಿ ಬಳಿ ಜಮಾಯಿಸಿದ ಎಎಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಲ್, ರೋಹ್ಟಕ್ ಮತ್ತು ಫರಿದಾಬಾದ್ ಸೇರಿದಂತೆ ಹರಿಯಾಣದ ಇತರ ಭಾಗಗಳಲ್ಲಿ ಎಎಪಿ ಪ್ರತಿಭಟನೆ ನಡೆಸಿದೆ.

ಎಎಪಿ ರಾಜ್ಯ ಘಟಕದ ಅಧ್ಯಕ್ಷ ಸುಶೀಲ್ ಗುಪ್ತಾ ಮಾತನಾಡಿ, ‘ಕೇಜ್ರಿವಾಲ್ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳಿಂದ ಬಿಜೆಪಿ ಸರ್ಕಾರ ಹೆದರುತ್ತಿದೆ . ಸರ್ವಾಧಿಕಾರಿ ಮೋದಿ ಸರ್ಕಾರವು ಆಮ್ ಆದ್ಮಿ ಪಕ್ಷವನ್ನು ನಾಶ ಮಾಡಲು ಬಯಸುತ್ತಿದೆ. ಆದರೆ ಇಂದು ಇಡೀ ದೇಶ ಪ್ರಾಮಾಣಿಕ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಜೊತೆ ದೃಢವಾಗಿ ನಿಂತಿದೆ' ಎಂದರು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ. ಬಳಿಕ ಅವರನ್ನು ಮಾರ್ಚ್‌ 28ರವರೆಗೆ ಇ.ಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೇಜ್ರಿವಾಲ್ ಬಂಧನ ವಿರೋಧಿಸಿ ಮಂಗಳವಾರ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ದೆಹಲಿ ಸಚಿವ ರಾಯ್ ಘೋಷಿಸಿದ್ದರು. ಜತೆಗೆ ರಾಷ್ಟ್ರವ್ಯಾಪಿ ‘ಬೃಹತ್‌ ಪ್ರತಿಭಟನೆ’ ನಡೆಸುವುದಾಗಿಯೂ ಅವರು ಹೇಳಿದ್ದರು.

ಮೋದಿ ನಿವಾಸಕ್ಕೆ ಮುತ್ತಿಗೆ ಕರೆ:

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.