ADVERTISEMENT

ಪಂಜಾಬ್ ಸಿಎಂ ಪ್ರಮಾಣವಚನ ಮಾ.16ಕ್ಕೆ; ಕೇಜ್ರಿವಾಲ್ ಕಾಲಿಗೆ ಬಿದ್ದ ಭಗವಂತ ಮಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2022, 11:33 IST
Last Updated 11 ಮಾರ್ಚ್ 2022, 11:33 IST
ಭಗವಂತ ಮಾನ್
ಭಗವಂತ ಮಾನ್   

ನವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ‌ಭಗವಂತ ಮಾನ್ ಅವರುಪಂಜಾಬ್ ಮುಖ್ಯಮಂತ್ರಿಯಾಗಿ ಮಾರ್ಚ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಿರುವ ಮಾನ್, ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿಯೇ ಭೇಟಿ ಮಾಡಿದ ಮಾನ್, ಕೇಜ್ರಿವಾಲ್ ಪಾದ ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಉಪಸ್ಥಿತರಿದ್ದರು.

ADVERTISEMENT

Moment of the day ❤️

When Punjab's CM-elect @BhagwantMann met AAP's National Convenor @ArvindKejriwal pic.twitter.com/63u3YXTWbN

— AAP (@AamAadmiParty) March 11, 2022

ಭಗವಂತ ಮಾನ್‌ ಅವರು ಅರವಿಂದ ಕೇಜ್ರಿವಾಲ್ ಅವರೊಂದಿಗೆ ಮಾರ್ಚ್ 13 ರಂದು ಅಮೃತಸರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:

ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಕೇವಲ 18 ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಬಿಜೆಪಿ ಎರಡು ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೂರು ಕ್ಷೇತ್ರಗಳಲ್ಲಿ ಜಯ ಕಂಡಿವೆ. ಬಹುಜನ ಸಮಾಜವಾದಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಒಂದೊಂದು ಕಡೆ ಗೆಲುವು ಸಾಧಿಸಿದ್ದಾರೆ.

2017ರ ಚುನಾವಣೆಯಲ್ಲಿ ಕಾಂಗ್ರೆಸ್‌ 77 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು. ಎಸ್‌ಎಡಿ 17, ಬಿಜೆಪಿ 3 ಹಾಗೂ ಪಕ್ಷೇತರರು 2 ಕ್ಷೇತ್ರಗಳಲ್ಲಿ ಗೆದ್ದಿದ್ದರು. 20 ಕಡೆ ಗೆಲುವಿನ ಖಾತೆ ತೆರೆದಿದ್ದ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

AAP's Punjab CM candidate Bhagwant Mann to take oath on March 16. He has invited Delhi CM Arvind Kejriwal for the swearing-in ceremony.

He will hold a roadshow in Amritsar on March 13 along with Delhi CM and party's national convener Arvind Kejriwal

(File pic) pic.twitter.com/EmPcEPvq0J

— ANI (@ANI) March 11, 2022

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.