
ಪಿಟಿಐನವದೆಹಲಿ: ನೌಕಾಪಡೆಗಾಗಿ ಅಂದಾಜು ₹ 1,700 ಕೋಟಿ ವೆಚ್ಚದಲ್ಲಿ 13 ‘ಲಿಂಕ್ಸ್–ಯು2’ ಎಂಬ ಬೆಂಕಿ ನಿಯಂತ್ರಣ ವ್ಯವಸ್ಥೆಗಳನ್ನು ಖರೀದಿಸುವ ಸಂಬಂಧ ರಕ್ಷಣಾ ಸಚಿವಾಲಯವು ಬೆಂಗಳೂರು ಮೂಲದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಜೊತೆ ಗುರುವಾರ ಒಪ್ಪಂದಕ್ಕೆ ಸಹಿ ಹಾಕಿದೆ.
ದೇಶೀಯವಾಗಿಯೇ ಅಭಿವೃದ್ಧಿಪಡಿಸಲಾಗಿರುವ ‘ಲಿಂಕ್ಸ್–ಯು2’ ವ್ಯವಸ್ಥೆಯು ಕಡಲು, ವಾಯುಪ್ರದೇಶ ಅಥವಾ ಭೂಮಿ ಮೇಲಿನ ಗುರಿಗಳನ್ನು ನಿಖರವಾಗಿ ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.