ADVERTISEMENT

ಆತಂಕ ಸೃಷ್ಟಿಸಿದ ಡ್ರೋನ್‌ !

ಪಿಟಿಐ
Published 13 ಜುಲೈ 2020, 12:54 IST
Last Updated 13 ಜುಲೈ 2020, 12:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು:ನಗರದ ಹೊರವಲಯದಲ್ಲಿರುವ ಹಳ್ಳಿಯೊಂದರಲ್ಲಿ ಸೋಮವಾರ ಡ್ರೋನ್‌ವೊಂದು ಪತ್ತೆಯಾಗಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ಈ ಡ್ರೋನ್‌ ಪಾಕಿಸ್ತಾನಕ್ಕೆ ಸೇರಿದ್ದಾಗಿದ್ದು,ಅಂತರರಾಷ್ಟ್ರೀಯ ಗಡಿ ದಾಟಿ ಭಾರತ ಪ್ರವೇಶಿಸಿದೆ ಎಂದೇ ಭಾವಿಸಲಾಗಿತ್ತು. ಆದರೆ, ಇದು ಭಾರತೀಯ ಸೇನೆಗೆ ಸೇರಿದ್ದಾಗಿದ್ದು, ತಾಲೀಮು ನಡೆಸುತ್ತಿದ್ದ ಸಂದರ್ಭದಲ್ಲಿ ಬ್ಯಾಟರಿ ಮುಗಿದು ನೆಲಕ್ಕುರುಳಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

‘ಸ್ಥಳೀಯರ ಮಾಹಿತಿ ಅನುಸಾರ ಸ್ಥಳಕ್ಕೆ ತೆರಳಿ ಡ್ರೋನ್‌ ಅನ್ನು ವಶಕ್ಕೆ ಪಡೆಯಲಾಗಿದೆ.ಕೇಂದ್ರಾಡಳಿತ ಪ್ರದೇಶವಾದ ಜಮ್ಮುವಿನೊಳಗೆ ಡ್ರೋನ್‌ ಮೂಲಕ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವ ಪಾಕಿಸ್ತಾನದಪುನರಾವರ್ತಿತ ಪ್ರಯತ್ನ ಇದಾಗಿರಬಹುದು ಎಂದೇ ಭಾವಿಸಲಾಗಿತ್ತು. ಆದರೆ, ಇದು ಭಾರತಕ್ಕೆ ಸೇರಿದ್ದಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಳೆದ ಜೂನ್‌ 20 ರಂದು ‌ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿಯಲ್ಲಿ, ಅಮೆರಿಕ ನಿರ್ಮಿತ ಅತ್ಯಾಧುನಿಕ ಎಂ4 ರೈಫಲ್ ಹಾಗೂ ಏಳು ಚೀನಾ ನಿರ್ಮಿತ ಗ್ರೆನೇಡ್‌ಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ ಒಂದನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.