ADVERTISEMENT

ಯೋಧನ ಅಪಹರಣ ಆಗಿಲ್ಲ: ರಕ್ಷಣಾ ಸಚಿವಾಲಯ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2019, 2:57 IST
Last Updated 9 ಮಾರ್ಚ್ 2019, 2:57 IST
   

ನವದೆಹಲಿ:ಭಾರತೀಯ ಸೇನೆಯ ಯೋಧರೊಬ್ಬರನ್ನು ಅಪಹರಿಸಲಾಗಿದೆ ಎಂಬುದು ಸುಳ್ಳು ಸುದ್ದಿ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ.

ಜಮ್ಮು ಮತ್ತು ಕಾಶ್ಮಿರದ ಬುಡ್ಗಾಮ್‌ನ ಕ್ವಾಜಿಪೋರಾದ ಚಾಡೋರದಿಂದ ಯೋಧರೊಬ್ಬರನ್ನು ಅಪಹರಿಸಲಾಗಿದೆ ಎಂದು ಮಾಧ್ಯಮಗಳು ಮಾಡಿರುವ ವರದಿ ಸತ್ಯಕ್ಕೆ ದೂರವಾದುದು. ಸೇನೆಯ ಯೋಧ ಸುರಕ್ಷಿತವಾಗಿದ್ದಾರೆ ಎಂದು ಸ್ಪಷ್ಟಪಡಿಸಿ ರಕ್ಷಣಾ ಸಚಿವಾಲಯ ಟ್ವೀಟ್‌ ಮಾಡಿದೆ.

ಊಹಾ ಪೋಹದ ಸುದ್ದಿಗಳನ್ನು ಹರಡಬೇಡಿ ಎಂದು ಸಚಿವಾಲಯ ವಕ್ತಾರರು ಟ್ವೀಟ್‌ ಮಾಡಿ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ADVERTISEMENT

ಬುಡ್ಗಾಮ್‌ನಿಂದ ತೆರಳುತ್ತಿದ್ದ ಸೇನಾ ಯೋಧನನ್ನು(ಮೊಹಮ್ಮದ್ ಯಾಸೀನ್‌) ಉಗ್ರರುಅಪಹರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಪ್ರಸಾರ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.