ADVERTISEMENT

ವಾಘಾ ತಲುಪಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2019, 11:25 IST
Last Updated 1 ಮಾರ್ಚ್ 2019, 11:25 IST
   

ನವದೆಹಲಿ: ಪಾಕ್ ವಶದಲ್ಲಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸಂಜೆ 4.25ರ ವೇಳೆಗೆ ವಾಘಾ (ಪಾಕ್ ನೆಲ)ಗಡಿ ತಲುಪಿದರು. ವಿಷಯ ತಿಳಿದ ತಕ್ಷಣ ಅಟ್ಟಾರಿಯಲ್ಲಿ (ಭಾರತದ ನೆಲ)ನೆರೆದಿದ್ದ ಸಾವಿರಾರು ಜನರು ಅಭಿನಂದನ್ ಮತ್ತು ಭಾರತೀಯ ಸೇನೆಯ ಪರವಾಗಿ ಘೋಷಣೆಗಳನ್ನು ಕೂಗಿದರು. ಹೂ ಎರಚಿ, ಡೋಲುಗಳ ದನಿಯ ಸಂಭ್ರಮದೊಂದಿಗೆಸ್ವಾಗತಿಸಲು ಅವರೆಲ್ಲರೂ ಸಜ್ಜಾಗಿದ್ದಾರೆ.

ಪ್ರಸ್ತುತ ವಾಘಾದಲ್ಲಿರುವ ಅಭಿನಂದನ್ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕು. ಕೆಲ ಕಾಗದ ಪತ್ರಗಳಿಗೆ ಸಹಿ ಹಾಕಿದ ನಂತರ ಅವರು ಭಾರತದ ನೆಲವನ್ನು ಪ್ರವೇಶಿಸಲಿದ್ದಾರೆ.

ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿ ಬುಧವಾರ ಪಾಕ್ ವಾಯುಪಡೆಯ ಯುದ್ಧವಿಮಾನಗಳೊಡನೆ ನಡೆದಿದ್ದ ಹೋರಾಟದಲ್ಲಿ ಅಭಿನಂದನ್ ತಮ್ಮ ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಇದೇ ಸಂದರ್ಭ ಶತ್ರುದೇಶದ ಕ್ಷಿಪಣಿಯೊಂದು ತಾಗಿ ಅಭಿನಂದನ್ ಅವರಿದ್ದ ಮಿಗ್ ವಿಮಾನ ಪತನಗೊಂಡಿತ್ತು.

ADVERTISEMENT

ಪ್ಯಾರಾಚೂಟ್ ಸಹಾಯದಿಂದ ವಿಮಾನದಿಂದ ಹೊರಜಿಗಿದ ಅಭಿನಂದನ್ ನೆಲ ಮುಟ್ಟಿದ ಸ್ಥಳ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಸೇರಿತ್ತು. ಸ್ಥಳೀಯರಿಂದ ತಪ್ಪಿಸಿಕೊಳ್ಳುವ ಯತ್ನ ವಿಫಲವಾದಾಗ ತಮ್ಮ ಬಳಿ ಇದ್ದ ದಾಖಲೆಗಳನ್ನು ಅಭಿನಂದನ್ ನಾಶಪಡಿಸಿದ್ದರು. ಸ್ಥಳೀಯರಿಂದ ಹಲ್ಲೆಗೊಳಗಾದ ಅಭಿನಂದನ್ ಅವರನ್ನು ನಂತರ ಪಾಕ್ ಸೇನೆ ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಅಭಿನಂದನ್ ಮೇಲೆ ಸ್ಥಳೀಯರು ಹಲ್ಲೆ ನಡೆಸುವ, ಅವರು ತನ್ನ ವಶದಲ್ಲಿರುವ ವಿಡಿಯೊಗಳನ್ನು ಪಾಕ್ ಗುರುವಾರ ಬಿಡುಗಡೆ ಮಾಡಿತ್ತು. ಜಿನಿವಾ ಒಪ್ಪಂದಕ್ಕೆ ಬದ್ಧವಾಗಿರಬೇಕಾದ ಅನಿವಾರ್ಯತೆ ಮತ್ತು ಅಂತರರಾಷ್ಟ್ರೀಯ ಸಮುದಾಯದ ಒತ್ತಡಕ್ಕೆ ಮಣಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಸಂಜೆ ಪಾಕ್ ಸಂಸತ್ತಿನಲ್ಲಿ ‘ಅಭಿನಂದನ್ ಅವರನ್ನು ಶಾಂತಿಯ ಸಂಕೇತವಾಗಿ ಬಿಡುಗಡೆ ಮಾಡಲಾಗುವುದು’ ಎಂದು ಘೋಷಿಸಿದ್ದರು.

ವಾಘಾ ಗಡಿಯಲ್ಲಿ ಅಭಿನಂದನ್ ಸ್ವಾಗತಿಸಲು ಸಿದ್ಧತೆ.

ಭಾರತ ಸರ್ಕಾರವು ಅಭಿನಂದನ್ ಅವರನ್ನು ವಾಯುಮಾರ್ಗದಲ್ಲಿ ಕರೆತರಲು ಉದ್ದೇಶಿಸಿತ್ತು. ಆದರೆ ಪಾಕ್ ಸರ್ಕಾರ ಸ್ಪಂದಿಸದ ಕಾರಣ ಭೂಮಾರ್ಗದಲ್ಲಿಯೇ, ವಾಘಾ–ಅಟ್ಟಾರಿ ಗಡಿಯ ಮೂಲಕ ಅಭಿನಂದನ್ ಭಾರತ ಪ್ರವೇಶಿಸಿದರು. ನೆರೆದಿದ್ದ ಸಾವಿರಾರು ಜನರು ದೇಶದ ಹೆಮ್ಮೆಯ ವೀರಯೋಧನನ್ನು ತೆರೆದ ಕರದಿಂದ ಸ್ವಾಗತಿಸಿದರು. ಬಿಡುಗಡೆ ವಿರೋಧಿಸಿ ಪಾಕಿಸ್ತಾನದ ನ್ಯಾಯಾಲಯದಲ್ಲಿ ಅರ್ಜಿಯೊಂದು ದಾಖಲಾದ ಕಾರಣ ಅಭಿನಂದನ್ ಭಾರತಕ್ಕೆ ಬರುವುದು ತಡವಾಯಿತು.

ಇವನ್ನೂ ಓದಿ...
*ಅಭಿನಂದನ್ ಬಿಡುಗಡೆ ಮಾಡಲು ಪಾಕಿಸ್ತಾನ ವಿಳಂಬ ಮಾಡಿದ್ದು ಯಾಕೆ?
*ವಿಂಗ್ ಕಮಾಂಡರ್ ಅಭಿನಂದನ್‌ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ...
*ಸೇನೆಯ ಬಗ್ಗೆ ಗೌರವವಿದ್ದರೆ ಫೇಸ್‌ಬುಕ್‌ನಲ್ಲಿ ಈ 10 ನಿಯಮಗಳನ್ನು ಪಾಲಿಸಿ
*ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನಂದನ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ
*ವಿಮಾನದಲ್ಲಿ ಅಭಿನಂದನ್‍ ಕುಟುಂಬಕ್ಕೆ ಎದ್ದು ನಿಂತು ಗೌರವ ಸೂಚಿಸಿದ ಪ್ರಯಾಣಿಕರು
*ಪಾಕ್‌ ಪ್ರಯಾಣಿಕರಿಗೆ ಆಹಾರ ವಿತರಿಸಿದ ಭಾರತದ ಪೊಲೀಸರು
*ವಾಘಾ- ಅಟ್ಟಾರಿ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಬಿಎಸ್‍ಎಫ್
*ಅಭಿನಂದನ್ ಕರೆತರಲು ವಿಮಾನ ಕಳಿಸಬೇಡಿ ಎಂದ ಪಾಕ್
*ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ
*ಅಭಿನಂದನ್‌ ಕರೆತನ್ನಿ: ಕಾಳಜಿಯ ಕರೆ
*ಪಾಕಿಸ್ತಾನದ ವಶದಲ್ಲಿ ಭಾರತದ ವಿಂಗ್‌ ಕಮಾಂಡರ್‌ ಅಭಿನಂದನ್‌? ವಿಡಿಯೊ ಬಿಡುಗಡೆ

*ಭಾರತ ವಾಯುಪಡೆ ಉರುಳಿಸಿದ ಪಾಕ್ ಯುದ್ಧವಿಮಾನದ ಮೊದಲ ಚಿತ್ರ ಬಹಿರಂಗ
*ಯಡಿಯೂರಪ್ಪ ಹೇಳಿಕೆಯನ್ನು ರಿಟ್ವೀಟ್ ಮಾಡಿ ವ್ಯಂಗ್ಯವಾಡಿದಪಾಕ್‌ ಪ್ರಧಾನಿಯ ಪಕ್ಷ​
*ಪೈಲಟ್‌ ಅಭಿನಂದನ್‌ ವಿಡಿಯೊ ಲಿಂಕ್ ತೆಗೆಯುವಂತೆ ಯುಟ್ಯೂಬ್‌ಗೆ ಐಟಿ ಸಚಿವಾಲಯ ಆಗ್ರಹ​
*ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ: ಯಡಿಯೂರಪ್ಪ​
*ನೀವು ನಿದ್ರೆ ಮಾಡ್ತೀರೋ ಇಲ್ವೋ; ಅಭಿನಂದನ್ ಅವರನ್ನು ಕರೆತನ್ನಿ: ನಟಿ ರಮ್ಯಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.