ADVERTISEMENT

9,000 ತಬ್ಲಿಗಿ ಜಮಾತ್ ಸದಸ್ಯರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 13:27 IST
Last Updated 2 ಏಪ್ರಿಲ್ 2020, 13:27 IST
ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಠಿ
ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಠಿ   

ನವದೆಹಲಿ: ಸುಮಾರು 9,000 ಜಮಾತ್ ಸದಸ್ಯರನ್ನು ಮತ್ತು ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವವರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ದೆಹಲಿಯಲ್ಲಿ 2,000ದಷ್ಟು ತಬ್ಲಿಗಿ ಜಮಾತ್ ಸದಸ್ಯರಿದ್ದಾರೆ. 1,804 ಜನರನ್ನು ಕ್ವಾರಂಟೈನ್ ಕೇಂದ್ರದಲ್ಲಿರಿಸಿದ್ದು, ಸೋಂಕುಲಕ್ಷಣವಿರುವ 334 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಹೇಳಿದ್ದಾರೆ.

ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ತಬ್ಲಿಗಿಜಮಾತ್ ಸದಸ್ಯರನ್ನು ಪತ್ತೆ ಹಚ್ಚುವ ಕಾರ್ಯಕ್ಕಾಗಿ ಆರೋಗ್ಯ ಸಚಿವಾಲಯ ಕಠಿಣ ಶ್ರಮವಹಿಸಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.