ಸಿಲಿಗುರಿಯಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರೊಬ್ಬರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು
–ಪಿಟಿಐ ಚಿತ್ರ
ಸಿಲಿಗುರಿ: ಸಂದೇಶ್‌ಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಇಲ್ಲಿನ ಸಚಿವಾಲಯಕ್ಕೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ, ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದಿದೆ.
ಬ್ಯಾರಿಕೇಡ್ ಹತ್ತಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.
ಘರ್ಷಣೆಯಲ್ಲಿ ಕೆಲವು ಪ್ರತಿಭಟನಕಾರರು ಮತ್ತು ಪೊಲೀಸರು ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.