ಶ್ರೀನಗರ: ಇಲ್ಲಿನ ಹರಿಸಿಂಗ್ ಸ್ಟ್ರೀಟ್ ಪ್ರದೇಶದ ಸ್ಥಳೀಯ ಪೊಲೀಸ್ ಹಾಗೂ ಸಿಆರ್‌ಪಿಎಫ್ ಚೌಕಿಯ ಬಳಿ ಮಂಗಳವಾರ ಅಪರಿಚಿತ ಉಗ್ರರು ನಡೆಸಿದ ಗ್ರೆನೆಡ್ ದಾಳಿಯಲ್ಲಿ ಎಸಿಬಿ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ.
‘ಬುಡ್ಗಾಂನ ಎಸಿಬಿ ಇನ್‌ಸ್ಪೆಕ್ಟರ್ ತನ್ವೀರ್ ಹುಸೇನ್ ಹಾಗೂ ಅವರ ಪತ್ನಿ ತನ್ವೀರಾ ಸೇರಿದಂತೆ ನಾಲ್ವರು ನಾಗರಿಕರು ಗಾಯಗೊಂಡಿದ್ದು, ಗಾಯಗೊಂಡ ನಾಲ್ವರನ್ನು ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ. ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಣಿವೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.