ADVERTISEMENT

ಪ್ರತ್ಯೇಕ ಅಪಘಾತ: 9 ಜನ ಸಾವು

ಪಿಟಿಐ
Published 22 ಆಗಸ್ಟ್ 2024, 7:43 IST
Last Updated 22 ಆಗಸ್ಟ್ 2024, 7:43 IST
<div class="paragraphs"><p> ಅಪಘಾತ</p></div>

ಅಪಘಾತ

   

ನವದೆಹಲಿ: ಬಿಹಾರ ಮತ್ತು ಒಡಿಶಾ ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 9 ಜನರು ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ಅರಾ–ಬಕ್ಸರ್‌ ಹೆದ್ದಾರಿಯಲ್ಲಿ ಜೀಪ್‌ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಜೀಪ್‌ನಲ್ಲಿದ್ದ 5 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೃತರು ಒಂದೇ ಕುಟುಂಬದವರು ಎನ್ನಲಾಗಿದೆ.

ಒಡಿಶಾದ ಗಂಜಾಮ್‌ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಹಾಗೂ ಟ್ಯಾಂಕರ್‌ ನಡುವೆ ಅಪಘಾತವಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ 13 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.