@JasmeenIndian ಎಕ್ಸ್ ಖಾತೆ ಚಿತ್ರ
ಬೆಂಗಳೂರು: ತಮಿಳುನಾಡು ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಮತ್ತು ಆಮ್ನಿ ನಡುವೆ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, 60 ಜನರಿಗೆ ಗಾಯಗಳಾಗಿವೆ.
ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಬೆಂಗಳೂರಿನಿಂದ ಚೆನ್ನೈನತ್ತ ಹೊರಟಿತ್ತು. ತಿರುಪತ್ತೂರು ಜಿಲ್ಲೆಯ ಚೆಟ್ಟಿಯಪ್ಪನ್ನೂರು ಬಳಿ ಎದುರಿನಿಂದ ಬಂದ ಆಮ್ನಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಐದು ಜನ ಮೃತಪಟ್ಟಿದ್ದಾರೆ. ಗಾಯಗೊಂಡ 64 ಜನರನ್ನು ರಕ್ಷಿಸಲಾಗಿದೆ. ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಲಬರ್ಟ್ ಜಾನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.