ಸಾವು
ಪ್ರಾತಿನಿಧಿಕ ಚಿತ್ರ
ಭದೇರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಶಿಬಿರದೊಳಗೆ ಸೇವಾ ರೈಫಲ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು, ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮೃತ ಯೋಧನನ್ನು ಸುರೇಶ್ ಬಿಸ್ವಾಲ್ ಎಂದು ಗುರುತಿಸಲಾಗಿದೆ. ಈತ ಸೋಮವಾರ ಭದೇರ್ವಾದಲ್ಲಿನ ಸರ್ನಾ ಶಿಬಿರದಲ್ಲಿ ಕಾವಲು ಕರ್ತವ್ಯದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಸೈನಿಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ವರದಿ ತಿಳಿಸಿದೆ.
ಯೋಧ ಒಡಿಶಾ ನಿವಾಸಿಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತ ತನ್ನ ಸರ್ವಿಸ್ ರೈಫಲ್ ಅನ್‌ಲೋಡ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭದೇರ್ವಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಶರ್ಮಾ ಹೇಳಿದ್ದಾರೆ..
ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.