ADVERTISEMENT

ಕೇರಳ | ಸ್ಥಳ ವಿವಾದ; ತಾಯಿ, ಮಗಳ ಮೇಲೆ ಆ್ಯಸಿಡ್ ದಾಳಿ

ಪಿಟಿಐ
Published 20 ಜುಲೈ 2022, 10:36 IST
Last Updated 20 ಜುಲೈ 2022, 10:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಜಮೀನಿಗೆ ಸಂಬಂಧಿಸಿ ಉಂಟಾದ ಗಡಿ ವಿವಾದದಲ್ಲಿ ತಾಯಿ ಹಾಗೂ ಪುತ್ರಿಯ ಮೇಲೆ ನೆರೆಯ ಮಹಿಳೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಕಾಟ್ಟಕಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸಿದ ಬಳಿಕ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ.

ADVERTISEMENT

ಸಂತ್ರೆಸ್ತೆಯ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.