ADVERTISEMENT

ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಬಲವರ್ಧನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 22:01 IST
Last Updated 14 ಮಾರ್ಚ್ 2022, 22:01 IST

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಮೂಲಸೌಕರ್ಯ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕಟೇಶ್‌ ಸರ್ಕಾರವನ್ನು ಆಗ್ರಹಿಸಿದರು.

ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸಮಸ್ಯೆ ಕುರಿತು ‘ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ‘ಒಳನೋಟ’ದಲ್ಲಿ ಪ್ರಕಟವಾಗಿದ್ದ ವರದಿಗಳನ್ನು ಆಧರಿಸಿ ಸೋಮವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳು ಇದ್ದೂ ಇಲ್ಲದಂತಾಗಿವೆ. ಅವುಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಈ ವಿಷಯದ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರಿಂದ ಉತ್ತರ ಪಡೆದು ಸದನದಲ್ಲಿ ಮಂಡಿಸುವುದಾಗಿ ಸಭಾ ನಾಯಕ ಕೋಟ ಶ್ರೀನಿವಾಸ ಪುಜಾರಿ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.