ADVERTISEMENT

ಚಿಕಿತ್ಸೆ ನಿರಾಕರಿಸದಂತೆ ಕ್ರಮ: ಕೇಂದ್ರ ಸೂಚನೆ

ಪಿಟಿಐ
Published 28 ಏಪ್ರಿಲ್ 2020, 20:07 IST
Last Updated 28 ಏಪ್ರಿಲ್ 2020, 20:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಡಯಾಲಿಸಿಸ್‌, ರಕ್ತ ಮರುಪೂರಣ, ಕಿಮೊಥೆರಪಿ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇಂತಹ ಅಗತ್ಯ ಚಿಕಿತ್ಸೆಗಳು ಸಿಗದೇ ರೋಗಿಗಳು ಪರದಾಡಿದ ಬಗ್ಗೆ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದ್ದಾಗಿ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಪ್ರೀತಿ ಸೂದನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT