ADVERTISEMENT

India Covid Update: ಸಕ್ರಿಯ ಪ್ರಕರಣ 13,187ಕ್ಕೆ ಇಳಿಕೆ

ಪಿಟಿಐ
Published 10 ನವೆಂಬರ್ 2022, 6:05 IST
Last Updated 10 ನವೆಂಬರ್ 2022, 6:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,016 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 13,187ಕ್ಕೆ ಇಳಿಕೆಯಾಗಿದೆ. ಈವರೆಗೆ ಒಟ್ಟು 4,41,20,267 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,46,63,968 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,514 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಒಟ್ಟು ಸೋಂಕಿತರ ಪೈಕಿ ಶೇ 0.03 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.78 ಆಗಿದೆ.

ದೇಶದಲ್ಲಿ ಈವರೆಗೆ 219.76 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.