ADVERTISEMENT

ಕೋವಿಡ್‌: 2,202 ಹೊಸ ಪ್ರಕರಣ, 27 ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2022, 11:11 IST
Last Updated 16 ಮೇ 2022, 11:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ದೇಶದಲ್ಲಿ ಹೊಸದಾಗಿ 2,202 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 27 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 17,317ಕ್ಕೆ ಇಳಿಕೆಯಾಗಿದೆ. ದಿನನಿತ್ಯದ ಸೋಂಕು ದೃಢ ಪ್ರಮಾಣ ಶೇ 0.74 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74 ರಷ್ಟಿದೆ.

ದೇಶದಲ್ಲಿ ಇಲ್ಲಿಯವರೆಗೆ 4,31,23,801 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 5,24,241 ಸೋಂಕಿತರು ಮೃತಪಟ್ಟಿದ್ದಾರೆ. 4,25,82,243 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.