ADVERTISEMENT

Covid India Update| ಇಂದು 10,488 ಪ್ರಕರಣ ಪತ್ತೆ: 313 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ನವೆಂಬರ್ 2021, 4:44 IST
Last Updated 21 ನವೆಂಬರ್ 2021, 4:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ದೇಶದಲ್ಲಿ ಇಂದು 10,488 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ 24 ಗಂಟೆಗಳಲ್ಲಿ ಒಟ್ಟು 313 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ.

ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 3,45,10,413 ಕ್ಕೆ ತಲುಪಿದೆ. ಒಟ್ಟು ಸಾವಿನ ಸಂಖ್ಯೆ 4,65,662 ಆಗಿದೆ.

ಸದ್ಯ ದೇಶದಲ್ಲಿ 1,22,714 ಸಕ್ರಿಯ ಪ್ರಕರಣಗಳಿದ್ದು, 3,39,22,037 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ಭಾರತದಲ್ಲಿ ಒಟ್ಟು 1,16,50,55,210 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.