ADVERTISEMENT

ಮುಂದುವರೆದ ಸಕ್ರಿಯ ಪ್ರಕರಣಗಳ ಏರಿಕೆ

ಪಿಟಿಐ
Published 15 ಏಪ್ರಿಲ್ 2022, 12:27 IST
Last Updated 15 ಏಪ್ರಿಲ್ 2022, 12:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ(ಪಿಟಿಐ): ದೇಶದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಏರಿಕೆ ಶುಕ್ರವಾರವು ಮುಂದುವರೆದಿದ್ದು, 949 ಹೊಸಪ್ರಕರಣದೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 11,191ಕ್ಕೆ ಏರಿಕೆಯಾಗಿದೆ.

ಆರು ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 5,21,743 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ 4,30,39,972 ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 133 ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ 98.76 ರಷ್ಟಿದೆ. ದಿನನಿತ್ಯದ ಕೋವಿಡ್‌ ದೃಢ ಪ್ರಮಾಣ ಶೇ 0.26 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT