ADVERTISEMENT

ಕೋವಿಡ್: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,451 ಹೊಸ ಪ್ರಕರಣ ಪತ್ತೆ

ಪಿಟಿಐ
Published 8 ನವೆಂಬರ್ 2021, 5:43 IST
Last Updated 8 ನವೆಂಬರ್ 2021, 5:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿಹೊಸದಾಗಿ 11,451 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,43,66,987ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಅವಧಿಯಲ್ಲಿ 2,019 ಹೊಸ ಸಕ್ರಿಯ ಪ್ರಕರಣಗಳ ಸಂಖ್ಯೆ ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,42,826ಕ್ಕೆ ಇಳಿಕೆಯಾಗಿದೆ. ಇದು ಕಳೆದ 262 ದಿನಗಳಲ್ಲಿ ವರದಿಯಾಗಿರುವಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ.

ಭಾನುವಾರ ಒಂದು ದಿನದಲ್ಲಿ ಕೋವಿಡ್‌ ಸೋಂಕಿನಿಂದ 266 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು ಸಾವಿನ ಸಂಖ್ಯೆ 4,61,057ಕ್ಕೆ ಏರಿಕೆಯಾಗಿದೆ.

ADVERTISEMENT

ಒಟ್ಟು ಸೋಂಕಿನ ಪ್ರಕರಣಗಳ ಸಕ್ರಿಯ ಪ್ರಮಾಣ ಶೇ 0.42ರಷ್ಟಾಗಿದೆ. ಕಳೆದ 31 ದಿನಗಳಿಂದ ದೇಶದಲ್ಲಿ ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆ 20 ಸಾವಿರದ ಒಳಗೆ ವರದಿಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.