ADVERTISEMENT

India Covid Update: ಸಕ್ರಿಯ ಪ್ರಕರಣಗಳ ಸಂಖ್ಯೆ 12,340ಕ್ಕೆ ಏರಿಕೆ

ಪಿಟಿಐ
Published 20 ಏಪ್ರಿಲ್ 2022, 5:38 IST
Last Updated 20 ಏಪ್ರಿಲ್ 2022, 5:38 IST
   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,067 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,47,594 ರಷ್ಟಾಗಿದೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 12,340 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 40 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದರಲ್ಲಿ 34 ಮಂದಿ ಕೇರಳದವರು. ಮಹಾರಾಷ್ಟ್ರದಲ್ಲಿ ಮೂವರು, ಉತ್ತರಪ್ರದೇಶ, ಮಿಜೋರಾಂ ಮತ್ತು ನಾಗಾಲ್ಯಾಂಡ್‌ನಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ. ಮೃತರ ಒಟ್ಟು ಸಂಖ್ಯೆ 5,22,006 ಕ್ಕೆ ಏರಿದೆ.

ಒಟ್ಟು ಸೋಂಕಿತರ ಪೈಕಿ ಶೇಕಡ 0.03 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇಕಡ 98.76 ರಷ್ಟಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ದರವು ಶೇಕಡ 0.49 ಮತ್ತು ವಾರದ ಪಾಸಿಟಿವಿಟಿ ದರವು ಶೇಕಡ 0.38 ರಷ್ಟಿದೆ.

ದೇಶದಾದ್ಯಂತ 186.90 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.