ADVERTISEMENT

India Covid-19 Update: ಕೋವಿಡ್‌ ಸಕ್ರಿಯ ಪ್ರಕರಣಗಳು ಇಳಿಕೆ

ಪಿಟಿಐ
Published 1 ನವೆಂಬರ್ 2021, 5:21 IST
Last Updated 1 ನವೆಂಬರ್ 2021, 5:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಒಂದು ದಿನದಲ್ಲಿ 12,514 ಕೋವಿಡ್‌ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದುಕೇಂದ್ರ ಆರೋಗ್ಯ ಸಚಿವಾಲಯದ ಸೋಮವಾರದ ನವೀಕರಿಸಿದ ದತ್ತಾಂಶ ಹೇಳಿದೆ.

ನವೀಕರಿಸಿದ ದತ್ತಾಂಶದ ಪ್ರಕಾರ ಸೋಮವಾರ ಬೆಳಿಗ್ಗೆ 8 ಗಂಟೆಗೆ, 251 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 4,58,437 ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,42,85,814 ಕ್ಕೆ ಏರಿಕೆಯಾಗಿದೆ. ಇದು ಕಳೆದ 248 ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಪ್ರಕರಣಗಳು.

ದೈನಂದಿನ ಹೊಸ ಪ್ರಕರಣಗಳು ಸತತ 127 ದಿನಗಳಿಂದ 50 ಸಾವಿರದೊಳಗೆ ವರದಿಯಾಗಿದೆ. ಸಕ್ರಿಯ ಪ್ರಕರಣಗಳು ಶೇ 0.46 ರಷ್ಟಿದೆ. ಚೇತರಿಕೆಯ ಪ್ರಮಾಣವು ಶೇ 98.20 ರಷ್ಟಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ಲಸಿಕಾ ಅಭಿಯಾನದಡಿ ಇದುವರೆಗೆ 106.31 ಗೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.