ADVERTISEMENT

ಕೋವಿಡ್‌: ದೇಶದಲ್ಲಿ ಸಕ್ರಿಯ ಪ್ರಕರಣಗಳ ಏರಿಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 10:39 IST
Last Updated 1 ಜೂನ್ 2022, 10:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಹೊಸದಾಗಿ 2,745 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 18,386ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬುಧವಾರ ಬೆಳಿಗ್ಗೆ 8ಕ್ಕೆ ಲಭ್ಯವಿರುವ ಮಾಹಿತಿ ‍ಪ್ರಕಾರ ಆರು ಮಂದಿ ಸಾವನ್ನಪ್ಪಿದ್ದು, ಸತ್ತವರ ಒಟ್ಟು ಸಂಖ್ಯೆ 5,24,636ಕ್ಕೆ ತಲುಪಿದೆ. ದಿನನಿತ್ಯದ ಸೋಂಕು ದೃಢ ಪ್ರಮಾಣ ಶೇ 0.60ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74ರಷ್ಟಿದೆ.

ದೇಶದಲ್ಲಿ ಇದುವರೆಗೆ 4,31,60,832 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4,26,17,810 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.