ADVERTISEMENT

Covid India Update| ಇಂದು 4,129 ಪ್ರಕರಣಗಳು ಪತ್ತೆ: 20 ಸಾವು 

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 5:41 IST
Last Updated 26 ಸೆಪ್ಟೆಂಬರ್ 2022, 5:41 IST
ಕೋವಿಡ್‌ ಲಸಿಕೀಕರಣದ ಸಾಂದರ್ಭಿಕ ಚಿತ್ರ
ಕೋವಿಡ್‌ ಲಸಿಕೀಕರಣದ ಸಾಂದರ್ಭಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,129 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಭಾನುವಾರ 4,777 ಪ್ರಕರಣಗಳು ಪತ್ತೆಯಾಗಿದ್ದವು.

ಅದೇ ಅವಧಿಯಲ್ಲಿ, ಕೋವಿಡ್ ಸಂಬಂಧಿತ 20 ಸಾವುಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,28,530ಕ್ಕೆ ಏರಿಕೆಯಾಗಿದೆ.

ಕಳೆದ ಒಂದು ದಿನ ಅವಧಿಯಲ್ಲಿ 4,688 ಮಂದಿ ಕೋವಿಡ್‌ನಿಂದ ಗುಣವಾಗಿದ್ದಾರೆ. ಸದ್ಯ ದೇಶದಲ್ಲಿ 43,415 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಭಾರತದ ದೈನಂದಿನ ಪಾಸಿಟಿವಿಟಿ ದರವು ಶೇ 2.51ರಷ್ಟು ಇದೆ ಎಂಬುದು ಆರೋಗ್ಯ ಇಲಾಖೆ ಮಾಹಿತಿಯಿಂದ ಗೊತ್ತಾಗಿದೆ.

ಸೋಮವಾರ ಬೆಳಗ್ಗೆ ಹೊತ್ತಿಗೆ ಭಾರತದಲ್ಲಿ 217.68 ಕೋಟಿಗೂ ಹೆಚ್ಚುಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.