ADVERTISEMENT

Covid India Update| ಇಂದು 4,777 ಪ್ರಕರಣ ಪತ್ತೆ: 23 ಸಾವು 

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 5:02 IST
Last Updated 25 ಸೆಪ್ಟೆಂಬರ್ 2022, 5:02 IST
ಕೋವಿಡ್‌ ಪತ್ತೆ ಪರೀಕ್ಷೆ
ಕೋವಿಡ್‌ ಪತ್ತೆ ಪರೀಕ್ಷೆ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶ 4,777 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,45,68,114ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 23 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಕೇರಳದಲ್ಲೇ 11 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಕೊರೊನಾ ವೈರಸ್‌ ಸೋಂಕಿಗೆ ದೇಶದಲ್ಲಿ ಇಲ್ಲಿಯ ವರೆಗೆ 5,28,510 ಮಂದಿ ಪ್ರಾಣ ತೆತ್ತಂತಾಗಿದೆ.

ಹೊಸ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ ಕಂಡಿದೆ. ಸದ್ಯ ಈಗ ದೇಶದಲ್ಲಿ 43,994 ಸಕ್ರಿಯ ಸೋಂಕು ಪ್ರಕರಣಗಳಿವೆ ಎಂಬುದು ಆರೋಗ್ಯ ಇಲಾಖೆಯ ಮಾಹಿತಿಯಿಂದ ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.