ADVERTISEMENT

India Covid Update: ಹೊಸದಾಗಿ 5,221 ಪ್ರಕರಣ ದೃಢ, 5,975 ಮಂದಿ ಚೇತರಿಕೆ

ಪಿಟಿಐ
Published 12 ಸೆಪ್ಟೆಂಬರ್ 2022, 4:24 IST
Last Updated 12 ಸೆಪ್ಟೆಂಬರ್ 2022, 4:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಸೋಮವಾರಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,221 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 15 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 47,176ಕ್ಕೆ ಇಳಿಕೆಯಾಗಿದೆ.

ಕಳೆದೊಂದು ದಿನದಲ್ಲಿ 5,975 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,25,239 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,45,00,580 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,165 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 2.82 ಮತ್ತು ವಾರದ ದೃಢ ಪ್ರಮಾಣ ಶೇ 1.72 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.11 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.71 ಆಗಿದೆ.

ದೇಶದಲ್ಲಿ ಈವರೆಗೆ 88.95 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 215.26 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.