ADVERTISEMENT

ದೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಕೋವಿಡ್‌ ಪ್ರಕರಣಗಳು ಸಕ್ರಿಯ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2023, 5:06 IST
Last Updated 17 ಏಪ್ರಿಲ್ 2023, 5:06 IST
   

ನವದೆಹಲಿ: ದೇಶದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟ 9,111 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 60 ಸಾವಿರ ದಾಟಿದೆ.

ಒಂದೇ ದಿನ 27 ಜನರು ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 5,31,141ಕ್ಕೆ ಏರಿಕೆಯಾಗಿದೆ.

ADVERTISEMENT

ಭಾನುವಾರ 10 ಸಾವಿರ ಪ್ರಕರಣಗಳು ವರದಿಯಾಗಿದ್ದವು. ಹಿಂದಿನ ದಿನಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.