ADVERTISEMENT

India Covid Update: ಹೊಸದಾಗಿ 5,108 ಪ್ರಕರಣ ದೃಢ, 5,675 ಮಂದಿ ಚೇತರಿಕೆ

ಪಿಟಿಐ
Published 14 ಸೆಪ್ಟೆಂಬರ್ 2022, 4:31 IST
Last Updated 14 ಸೆಪ್ಟೆಂಬರ್ 2022, 4:31 IST
   

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,108 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 45,749ಕ್ಕೆ ಇಳಿಕೆಯಾಗಿದೆ.

ಕಳೆದೊಂದು ದಿನದಲ್ಲಿ 5,675 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,36,092 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,45,10,057 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 52,82,16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 1.44 ಮತ್ತು ವಾರದ ದೃಢ ಪ್ರಮಾಣ ಶೇ 1.70 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.71 ಆಗಿದೆ.

ದೇಶದಲ್ಲಿ ಈವರೆಗೆ 89.02 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 215.67 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.