ADVERTISEMENT

India Covid Update: ಹೊಸದಾಗಿ 7,946 ಪ್ರಕರಣ, 9,828 ಮಂದಿ ಗುಣಮುಖ

ಪಿಟಿಐ
Published 1 ಸೆಪ್ಟೆಂಬರ್ 2022, 4:42 IST
Last Updated 1 ಸೆಪ್ಟೆಂಬರ್ 2022, 4:42 IST
   

ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 7,946 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 37 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 62,748ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ:

ಕಳೆದೊಂದು ದಿನದಲ್ಲಿ 9,828 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,38,45,680 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ದೇಶದಲ್ಲಿ ಇದುವರೆಗೆ 4,44,36,339 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,27,911 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 2.98 ಮತ್ತು ವಾರದ ದೃಢ ಪ್ರಮಾಣಶೇ2.57 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.14 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.67 ಆಗಿದೆ.

ದೇಶದಲ್ಲಿ ಈವರೆಗೆ 88.61 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 212.52 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.