ADVERTISEMENT

ಕೋವಿಡ್‌: 272 ಹೊಸ ಪ್ರಕರಣ; ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆ

ಪಿಟಿಐ
Published 15 ಜನವರಿ 2024, 6:43 IST
Last Updated 15 ಜನವರಿ 2024, 6:43 IST
<div class="paragraphs"><p> ಸಾಂದರ್ಭಿಕ ಚಿತ್ರ </p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 272 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ದೇಶದ ಒಟ್ಟಾರೆ ಪ್ರಕರಣಗಳು 2,990ಕ್ಕೆ ಇಳಿಕೆಯಾಗಿವೆ ಎಂದು ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಈ ಅವಧಿಯಲ್ಲಿ ಯಾವುದೇ ಸಾವು ದಾಖಲಾಗಿಲ್ಲ.

ADVERTISEMENT

2023ರ ಡಿಸೆಂಬರ್‌ 5ರ ಹೊತ್ತಿಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿತ್ತು. ಆದರೆ ಶೀತ ಹವಾಗುಣದಿಂದಾಗಿ ಹೊಸ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿತ್ತು. ಡಿಸೆಂಬರ್ 31ರಂದು 841 ಪ್ರಕರಣಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಇರುವ ಸಕ್ರಿಯ ಪ್ರಕರಣಗಳ ಪೈಕಿ ಶೇ 92ರಷ್ಟು ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

2020ರ ಆದಿಯಲ್ಲಿ ಕೋವಿಡ್‌ ಸಾಂಕ್ರಮಿಕ ಶುರುವಾದ ಬಳಿಕ ದೇಶದಲ್ಲಿ ಈವರೆಗೆ 4.5 ಕೋಟಿ ಮಂದಿಗೆ ಸೋಂಕು ತಗುಲಿದ್ದು, 5.3 ಲಕ್ಷ ಜನರು ಸಾವಿಗೀಡಾಗಿದ್ದಾರೆ. 4.4 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 220.67 ಕೋಟಿ ಡೋಸ್‌ ಲಸಿಕೆಗಳನ್ನು ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.