ADVERTISEMENT

India Covid Updates: ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆ

ಪಿಟಿಐ
Published 8 ಆಗಸ್ಟ್ 2022, 6:44 IST
Last Updated 8 ಆಗಸ್ಟ್ 2022, 6:44 IST
   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 16,167 ಕೋವಿಡ್ ‌ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,41,61,899ಕ್ಕೆ ಜಿಗಿದಿದೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇನ್ನು, ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ ಕೇರಳದಲ್ಲಿ 15 ಸಾವುಸೇರಿದಂತೆ ದೇಶದಾದ್ಯಂತ 41 ಮಂದಿ ಸಾವಿಗೀಡಾಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,730ಕ್ಕೆ ಏರಿದೆ.

ADVERTISEMENT

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.31 ರಷ್ಟು ಸಕ್ರಿಯ ಪ್ರಕರಣಗಳಿವೆ. ದೇಶದ ಕೋವಿಡ್ ಚೇತರಿಕೆ ದರ ಶೇಕಡ 98.50 ರಷ್ಟಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 6.14 ರಷ್ಟಿದ್ದು, ವಾರದ ದೃಢ ಪ್ರಮಾಣ ಶೇಕಡ 4.64 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.