ADVERTISEMENT

Covid India Updates: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆ

ಪಿಟಿಐ
Published 26 ಡಿಸೆಂಬರ್ 2022, 5:42 IST
Last Updated 26 ಡಿಸೆಂಬರ್ 2022, 5:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಹೊಸದಾಗಿ 196 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು 3,428ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಿಂದ ತಿಳಿದು ಬಂದಿದೆ.

ಈವರೆಗೆ ಕೋವಿಡ್ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,77,302) ರಷ್ಟಾಗಿದೆ.

24 ಗಂಟೆಗಳಲ್ಲಿ ಕೇರಳದಲ್ಲಿ ಇಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,695ಕ್ಕೆ ಏರಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ದರ ಶೇಕಡ 0.56ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 0.16 ರಷ್ಟಿದೆ.

24 ಗಂಟೆಗಳಲ್ಲಿ 35,173 ಕೋವಿಡ್ ಮಾದರಿ ಪರೀಕ್ಷೆ ನಡೆಸಲಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇಕಡ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.80ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.