ADVERTISEMENT

Covid India Updates: ಹೊಸದಾಗಿ 188 ಪ್ರಕರಣಗಳು ದಾಖಲು

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 5:55 IST
Last Updated 28 ಡಿಸೆಂಬರ್ 2022, 5:55 IST
   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 188 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,468ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,77,647) ಏರಿದೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 0.14 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ. 0.18 ರಷ್ಟಿದೆ.

ADVERTISEMENT

ಕಳೆದ 24 ಗಂಟೆಗಳ ಅವಧಿಯಲ್ಲಿ 1,34,995 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.