ADVERTISEMENT

Covid 19| ದೇಶದಲ್ಲಿ 5 ಸಾವಿರ ಗಡಿ ದಾಟಿದ ಕೋವಿಡ್‌ ಪ್ರಕರಣ: ಕೇರಳದಲ್ಲಿ ಅಧಿಕ

ಪಿಟಿಐ
Published 6 ಜೂನ್ 2025, 9:57 IST
Last Updated 6 ಜೂನ್ 2025, 9:57 IST
ಕೋವಿಡ್‌ 19– ಪ್ರಾತಿನಿಧಿಕ ಚಿತ್ರ
ಕೋವಿಡ್‌ 19– ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಐದು ಸಾವಿರ ಗಡಿ ದಾಟಿವೆ.

ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು(1,679) ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ ಗುಜರಾತ್(615), ಪಶ್ಚಿಮ ಬಂಗಾಳ(596) ಮತ್ತು ದೆಹಲಿ(592) ರಾಜ್ಯಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೊರಡಿಸಿದ ಮಾಹಿತಿಯಲ್ಲಿ ಹೇಳಲಾಗಿದೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ, ಐಸೋಲೇಷನ್ ಬೆಡ್‌ಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ADVERTISEMENT

ಸದ್ಯ ಭಾರತದಲ್ಲಿ 5,364 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಡ್ರಿಲ್‌ ನಡೆಸಲಾಗುತ್ತಿದೆ. ಸೋಂಕಿನ ತೀವ್ರತೆ ಕಡಿಮೆ ಇದೆ. ಬಹಳಷ್ಟು ಸೋಂಕಿತರು ಮನೆ ಆರೈಕೆಯಲ್ಲಿದ್ದಾರೆ. ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

2025ರ ಜನವರಿಯಿಂದ ಇಲ್ಲಿಯವರೆಗೆ ದೇಶದಲ್ಲಿ 55 ಸಾವುಗಳು ವರದಿಯಾಗಿವೆ. ಮೇ 22 ರಂದು ದೇಶದಲ್ಲಿ ಒಟ್ಟು 257 ಸಕ್ರಿಯ ಪ್ರಕರಣಗಳಿದ್ದವು. ಈ ಸಂಖ್ಯೆ ಮೇ 26ರ ಹೊತ್ತಿಗೆ 1,010ಕ್ಕೆ ಏರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.