ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,910 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 53,974ಕ್ಕೆ ಇಳಿಕೆಯಾಗಿದೆ.
ಕಳೆದೊಂದು ದಿನದಲ್ಲಿ 7,034 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,38,80,464 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 4,44,62,445 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,007 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 2.60 ಮತ್ತು ವಾರದ ದೃಢ ಪ್ರಮಾಣ ಶೇ 2.15 ಆಗಿದೆ.
ಒಟ್ಟು ಸೋಂಕಿತರ ಪೈಕಿ ಶೇ 0.12 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.69 ಆಗಿದೆ.
ದೇಶದಲ್ಲಿ ಈವರೆಗೆ 88.73 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 213.52 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.