ADVERTISEMENT

Covid-19 India Update: 242 ದಿನಗಳಲ್ಲೇ ಕನಿಷ್ಠ ಸಕ್ರಿಯ ಪ್ರಕರಣ

ಪಿಟಿಐ
Published 27 ಅಕ್ಟೋಬರ್ 2021, 5:07 IST
Last Updated 27 ಅಕ್ಟೋಬರ್ 2021, 5:07 IST
.
.   

ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ13,451 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ1,62,661ಕ್ಕೆ ಕುಸಿದಿದೆ. ಇದು 242 ದಿನಗಳಲ್ಲೇ ದಾಖಲಾದ ಕನಿಷ್ಠ ಪ್ರಮಾಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್‌ನಿಂದ 585 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 4,55,653ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಕೋವಿಡ್ ಪೀಡಿತರ ಸಂಖ್ಯೆ3,42,15,653 ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಪ್ರಮಾಣ ಒಟ್ಟು ಸೋಂಕಿತರ ಪ್ರಮಾಣಕ್ಕೆ ಹೋಲಿಸಿದರೆ ಶೇ 0.48 ರಷ್ಟಿದ್ದು, ಗುಣಮುಖರಾದವರ ಪ್ರಮಾಣ ಶೇ 98.19ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.