ADVERTISEMENT

ಗುಜರಾತ್‌ ಎಟಿಎಸ್‌ನಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 13:12 IST
Last Updated 25 ಜೂನ್ 2022, 13:12 IST
ಪ್ರಜಾವಾಣಿ ವಿಶೇಷ ಸಂದರ್ಶನದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸತೆಲ್ವಾಡ್ ಅವರು ಮಾತನಾಡಿದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ಪ್ರಜಾವಾಣಿ ವಿಶೇಷ ಸಂದರ್ಶನದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸತೆಲ್ವಾಡ್ ಅವರು ಮಾತನಾಡಿದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌   

ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) ತಂಡ ಮುಂಬೈನಲ್ಲಿ ವಿಚಾರಣೆ ಒಳಪಡಿಸಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಅವರ ಎನ್‌ಜಿಒವೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಮುಂಬೈನಲ್ಲಿರುವ ತೀಸ್ತಾ ನಿವಾಸಕ್ಕೆ ತೆರಳಿದ್ದ ಎಟಿಎಸ್ ತಂಡ ಅವರನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದೆ.

ADVERTISEMENT

2002ರ ಗುಜರಾತ್ ಗಲಭೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ 64 ಮಂದಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿತ್ತು.

ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮುಖಂಡ ಎಹಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತೀಸ್ತಾ ಸೆತಲ್ವಾಡ್ ಸಹ ಈ ಪ್ರಕರಣದಲ್ಲಿ ಸಹ ಅರ್ಜಿದಾರರಾಗಿದ್ದರು. 2002ರ ಗಲಭೆ ಸಂತ್ರಸ್ತರಿಗಾಗಿ ತೀಸ್ತಾ ಅವರ ಎನ್‌ಜಿಒ ಕೆಲಸ ಮಾಡುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.