ADVERTISEMENT

ಶಬರಿಮಲೆ| ಸರ್ಕಾರದಿಂದ ಮಹಿಳಾ ವಿರೋಧಿ ನಡೆ: ತೃಪ್ತಿ ದೇಸಾಯಿ ಆರೋಪ

ಏಜೆನ್ಸೀಸ್
Published 16 ನವೆಂಬರ್ 2019, 12:33 IST
Last Updated 16 ನವೆಂಬರ್ 2019, 12:33 IST
ತೃಪ್ತಿ ದೇಸಾಯಿ
ತೃಪ್ತಿ ದೇಸಾಯಿ   

ಶಬರಿಮಲೆ:ಇಲ್ಲಿನ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಭದ್ರತೆ ಒದಗಿಸದ ಕೇರಳ ಸರ್ಕಾರದ ನಡೆಯನ್ನು ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಟೀಕಿಸಿದ್ದಾರೆ.

‘ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ಭದ್ರತೆ ಒದಗಿಸುವುದಿಲ್ಲ ಎಂದು ಸರ್ಕಾರ ನಿನ್ನೆ ಹೇಳಿತ್ತು. ಇಂದು ದೇಗುಲಕ್ಕೆ ತೆರಳುತ್ತಿದ್ದ ಸ್ತ್ರೀಯರನ್ನು ತಡೆಯಲಾಗಿದೆ. ಸರ್ಕಾವು ಮಹಿಳಾ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ಶಬರಿಮಲೆ ದೇಗುಲ ಪ್ರವೇಶಿಸಿದ್ದ ಕೋಯಿಕ್ಕೋಡ್‌ನ ಕೊಯಿಲಾಂಡಿ ನಿವಾಸಿ ಬಿಂದು ಮತ್ತು ಮಲಪ್ಪುರಂನ ಅಂಗಡಿಪ್ಪುರಂ ನಿವಾಸಿ ಕನಕದುರ್ಗಾ ಅವರಿಗೆ ಸರ್ಕಾರ ಭದ್ರತೆ ಒದಗಿಸಿತ್ತು. ಆದರೆ, ಈ ವರ್ಷ ಭದ್ರತೆ ಒದಗಿಸಲಾಗದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ ಅಂತಿಮ ತೀರ್ಪು ಬರುವವರೆಗೂಮಹಿಳೆಯರಿಗೆ ಪ್ರವೇಶ ನೀಡದಿರಲು ಕೇರಳ ಸರ್ಕಾರ ತೀರ್ಮಾನಿಸಿದೆ.

ಈ ಮಧ್ಯೆ, ಎರಡು ತಿಂಗಳ ಅವಧಿಯ ಶಬರಿಮಲೆ ತೀರ್ಥಯಾತ್ರೆ ಋತು ಶನಿವಾರ ಆರಂಭವಾಗಿದ್ದು, ಸಂಜೆ ಐದು ಗಂಟೆಗೆ ಅಯ್ಯಪ್ಪ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.